ಬೆಂಗಳೂರು: ಫ್ಲೈಓವರ್ ಮೇಲೆ ಸ್ಕಿಡ್ ಆಗಿ ಬಿದ್ದ ಬೈಕ್ ಸವಾರನ ಮೇಲೆ ಅಪರಿಚಿತ ವಾಹನವೊಂದು ಹರಿದುಹೋದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಆರ್.ಮಾರುಕಟ್ಟೆ ಬಳಿ ನಡೆದಿದೆ.
ಶಂಕರ್ ಮೃತ ದುರ್ದೈವಿ. ಬೈಕ್ ನಲ್ಲಿ ತೆರಳುತ್ತಿದ್ದ ಶಂಕರ್ ಸ್ಕಿಡ್ ಆಗಿ ಕೆಳಗೆ ಬಿದ್ದಿದಾರೆ. ಈ ವೇಳೆ ಬಂದ ಅಪರಿಚಿತ ವಾಹನ ಅವರ ಮೇಲೆ ಹರಿದು ಹೋಗಿದ್ದು, ಸ್ಥಳದಲ್ಲೇ ಶಂಕರ್ ಸಾವನ್ನಪ್ಪಿದ್ದಾರೆ.
ಸದ್ಯ ಶಂಕರ್ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.