ಕೃಷ್ಣಗಿರಿ: ಚಾಲಕನ ನಿಯಂತ್ರಣತಪ್ಪಿ ಯಾತ್ರಿಕರ ಬಸ್ ಹಳ್ಳಕ್ಕೆ ಬಿದ್ದಿದ್ದು, 40 ಪ್ರಯಾಣಿಕರ ಸ್ಥಿತಿ ಗಂಭೀರವಾಗಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಉತಂಗರೈ ಚೆನ್ನಮಲೈ ಶಾಲೆ ಬಳಿ ನಡೆದಿದೆ.
ಬಸ್ ಧರ್ಮಪುರಿ ಸಮೀಪದ ಇಟ್ಟಯಂಪಟ್ಟೆ ಗ್ರಾಮದಿಂದ ಓಂ ಶಕ್ತಿ ದೇವಸ್ಥಾನಕ್ಕೆ ತೆರಳುತ್ತಿತ್ತು. ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಪರಿಣಾಮ ಬಸ್ ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, 40 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಸ್ಥಳೀಯರು ಭಕ್ತರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ತುಂತುರು ಮಳೆ, ಮಂಜಿನಿಂದಾಗಿ ಚಾಲಕನಿಗೆ ನಿಯಂತ್ರಣತಪ್ಪಿ ಬಸ್ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಉತಂಗರೈ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.