ಬೆಳಗಾವಿ: ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮ ಪಂಚಾಯತಯಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳನ್ನು ಇಲಾಖೆಯ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಭರ್ತಿ ಮಾಡಲು ಮುಂದಾಗಿದ್ದು, ಅರ್ಜಿ ಆಹ್ವಾನಿಸಿದೆ.
ಮಾಸಿಕ 9000 ಗೌರವ ಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಸಂಬಂಧಪಟ್ಟ ಗ್ರಾಮ ಪಂಚಾಯತ ವ್ಯಾಪ್ತಿಯ ಅರ್ಹ ವಿಕಲಚೇತನ ಅಭ್ಯಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಟ್ 40% ಮತ್ತು ಅದಕ್ಕಿಂತ ಹೆಚ್ಚಿನ ವಿಕಲತೆ ಪ್ರಮಾಣ ಹೊಂದಿರಬೇಕು. ಅರ್ಜಿದಾರರು ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಗೊಳಪಟ್ಟಿರಬೇಕು. ಕನಿಷ್ಟ ಎಸ್ಎಸ್ಎಲ್ಸಿ ಉರ್ತ್ತಿಣರಾಗಿದ್ದು, ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಕನಿಷ್ಟ 18 ರಿಂದ 45 ವರ್ಷ ವಯೋಮಿತಿಯಲ್ಲಿರಬೇಕು.
ವಿಕಲಚೇತನ ಮಹಿಳೆ, ಪ.ಜಾತಿ ಮತ್ತು ಪ. ಪಂಗಡದ ಅಭ್ಯರ್ಥಿಗಳು ಹಾಗೂ ಇಲಾಖೆಯ ಯೋಜನೆಗಳ ಬಗ್ಗೆ ಜ್ಞಾನ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ದಿನಾಂಕ:8-1-2025ರ ಸಂಜೆ 5 ಗಂಟೆಯೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಆಯಾ ತಾಲೂಕುಗಳ ಪಂಚಾಯತ ಕಾರ್ಯಲಯದ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕಿನ ಎಂಆರ್ಡಬ್ಲ್ಯೂ ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.