ರಾಮನಗರ: ಅತ್ಯಾಚಾರ ಆರೋಪದಡಿ ಬಿಜೆಪಿ ಮುಖಂಡನನ್ನು ಬಂಧಿಸಲಾಗಿದೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಠಾಣೆ ಪೋಲೀಸರು ಚಲುವರಾಮು ಅವರನ್ನು ಬಂಧಿಸಿದ್ದಾರೆ.
ಪ್ರಜ್ಞೆ ತಪ್ಪಿಸಿ ರಾತ್ರಿಯಿಡಿ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ಸೂರನಹಳ್ಳಿಯ ಚಲುವರಾಮು ವಿರುದ್ಧ ಬ್ಯೂಟಿಷಿಯನ್ ಆಗಿರುವ ಮಹಿಳೆ ಆರೋಪ ಮಾಡಿದ್ದಾರೆ. ರಾಮನಗರದ ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾಗಿ ಆರೋಪಿಸಲಾಗಿದೆ. ಚಲುವರಾಮು ಅವರನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಆರೋಪಿ ರವಿಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.