ಹಾವೇರಿ: ಹೊಟ್ಟೆ ನೋವು ಎಂದು ಹಾವೇರಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ಓವರ್ ಡೋಸ್ ನಿಂದಾಗಿ ಮಹಿಳೆ ಮೃತಪಟ್ಟಿರುವುದಾಗಿ ಕುಟುಂಬದವರು ಆರೋಪಿಸಿದ್ದಾರೆ.
ಬ್ಯಾಡಗಿ ಪಟ್ಟಣದ ಶಮೀನಾ ಬಾನು ಅರಳಿಕಟ್ಟೆ(23) ಮೃತಪಟ್ಟವರು ಎಂದು ಹೇಳಲಾಗಿದೆ. ವೀರಾಪುರ ಆಸ್ಪತ್ರೆಯ ವೈದ್ಯರ ವಿರುದ್ಧ ಮಹಿಳೆಯ ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ವೈದ್ಯರ ನಿರ್ಲಕ್ಷದಿಂದಾಗಿ ಶಮೀನಾ ಬಾನು ಮೃತಪಟ್ಟಿದ್ದಾಗಿ ಆರೋಪಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.