ನವದೆಹಲಿ: ಗುರುವಾರ ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್(92) ಅಂತ್ಯಕ್ರಿಯೆ ಶನಿವಾರ ಬೆಳಗ್ಗೆ 11:45ಕ್ಕೆ ಸರ್ಕಾರಿ ಗೌರವಗಳೊಂದಿಗೆ ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ ನೆರವೇರಲಿದೆ.
ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಸೇನಾ ಗೌರವದೊಂದಿಗೆ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಪ್ರಧಾನಿ ಮೋದಿಯವರಿಗೆ ರಾಜ್ಯಸಭೆ ವಿಪಕ್ಷ ನಾಯಕ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದು, ಸ್ಮಾರಕ ನಿರ್ಮಿಸುವ ಜಾಗದಲ್ಲಿಯೇ ಅಂತ್ಯಕ್ರಿಯೆ ನೆರವೇರಿಸಬೇಕೆಂದು ಮನವಿ ಮಾಡಿದ್ದಾರೆ. ಅಂತ್ಯಕ್ರಿಯೆ ಮಾಡುವ ಸ್ಥಳ ಸ್ಮಾರಕ ನಿರ್ಮಾಣ ಮಾಡುವಂತಿರಬೇಕು ಪ್ರಧಾನಿ ಮೋದಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.