ಬೆಂಗಳೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಗೌರವಾರ್ಥ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಕೇಂದ್ರ ಪ್ರಾರಂಭಿಸಲು ಚಿಂತನೆ ನಡೆದಿದೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಪರಿವರ್ತನಾತ್ಮಕ ಆರ್ಥಿಕ ಸುಧಾರಣೆಗಳ ಮೂಲಕ ಅವರ ಪರಂಪರೆ ಜೀವಂತವಾಗಿದೆ. ಅವರ ಕೊಡುಗೆಗಳನ್ನು ಗೌರವಿಸಲು, ಅವರ ದೂರದೃಷ್ಟಿಯ ನೀತಿಗಳನ್ನು ಅಧ್ಯಯನ ಮಾಡಲು, ಭಾರತದ ಭವಿಷ್ಯವನ್ನು ರೂಪಿಸಲು ಹಾಗೂ ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಕೇಂದ್ರವನ್ನು ಪ್ರಾರಂಭಿಸಲು ನಾವು ಚಿಂತಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಪರಿವರ್ತನಾತ್ಮಕ ಆರ್ಥಿಕ ಸುಧಾರಣೆಗಳ ಮೂಲಕ ಅವರ ಪರಂಪರೆ ಜೀವಂತವಾಗಿದೆ. ಅವರ ಕೊಡುಗೆಗಳನ್ನು ಗೌರವಿಸಲು, ಅವರ ದೂರದೃಷ್ಟಿಯ ನೀತಿಗಳನ್ನು ಅಧ್ಯಯನ ಮಾಡಲು, ಭಾರತದ ಭವಿಷ್ಯವನ್ನು ರೂಪಿಸಲು ಹಾಗೂ ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಕೇಂದ್ರವನ್ನು… pic.twitter.com/inHUGwuhwf
— DK Shivakumar (@DKShivakumar) December 27, 2024