HomeKarnatakaRain alert Karnataka : ವಾಯುಭಾರ ಕುಸಿತ : ರಾಜ್ಯದ ಹಲವೆಡೆ 3-4 ದಿನ ಭಾರಿ...

Rain alert Karnataka : ವಾಯುಭಾರ ಕುಸಿತ : ರಾಜ್ಯದ ಹಲವೆಡೆ 3-4 ದಿನ ಭಾರಿ ‘ಮಳೆ’ ಮುನ್ಸೂಚನೆ.!

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಕಡೆ ಮೋಡ ಕವಿದ ವಾತಾವರಣವಿದ್ದು, ಬೆಂಗಳೂರಿನಲ್ಲಿ ಎರಡು ದಿನಗಳಿಂದ ಒಂದೇ ಸಮನೆ ಜಿಟಿ ಜಿಟಿ ಮಳೆಯಾಗುತ್ತಿದೆ. ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಹಲವು ಕಡೆ ಮುಂದಿನ 3-4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳ ಉಪಸಾಗರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂಗಾರು ಮಳೆ ಮಾರುತಗಳ ಪ್ರಭಾವದಿಂದ ಮೂರು ದಿನಗಳಿಂದ ರಾಜಧಾನಿ ಬೆಂಗಳೂರು ಸೇರಿ ವಿವಿಧೆಡೆ ಮೋಡ ಕವಿದ ವಾತಾವರಣ ಉಂಟಾಗಿದೆ. ಕೆಲವು ಕಡೆ ತುಂತುರು ಮಳೆಯಾಗಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡಿನ ಚಿಕ್ಕಮಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ತುಂತುರು ಮಳೆ ಆಗುವ ಸಾಧ್ಯತೆಯಿದ್ದು, ಉಳಿದ ಭಾಗದಲ್ಲಿ ಒಣಹವೆ ಇರಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular