ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಕಾರ್ಯಾಚರಣೆ ನಡೆಸಿರುವ ಪೊಲೀಸರು ಅಕ್ರಮ ಕಸಾಯಿಖಾನೆಗಳ ಮೇಲೆ ದಾಳಿ ಮಾಡಿ, ಗೋಮಾಂಸ ವಶಕ್ಕೆ ಪಡೆದು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಭದ್ರಾವತಿ ಹಳೆನಗರ ಪೊಲೀಸ್ ಠಾಣೆ ವ್ಯಾಪ್ತಿಯ ಅನ್ವರ್ ಕಾಲೋನಿಯಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಮಜೀದ್ ಎಂಬುವರ ಕಸಾಯಿಖಾನೆಯಲ್ಲಿ 70 ಕೆಜಿ, ಯಾಸಿನ್ ಅವರ ಕಸಾಯಿಖಾನೆಯಲ್ಲಿ 62 ಕೆಜಿ ಗೋಮಾಂಸ ಪಡೆಯಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.
ಶಿವಮೊಗ್ಗದ ಸೂಳೇಬೈಲ್ ನಲ್ಲಿರುವ ಕಸಾಯಿಖಾನೆಯಲ್ಲಿ ತುಂಗಾನಗರ ಠಾಣೆ ಪೊಲೀಸರು ದಾಳಿ ಮಾಡಿದ್ದು, 68 ಕೆಜಿ ಗೋಮಾಂಸ ವಶಕ್ಕೆ ಪಡೆದಿದ್ದಾರೆ. ಸೂಳೆಬೈಲ್ ನಿವಾಸಿ ಆಸೀಫ್ ಮೊಹಮ್ಮದ್, ಲಷ್ಕರ್ ಮೊಹಲ್ಲಾ ನಿವಾಸಿ ಸೈಯದ್ ಮುಬಾರಕ್ ಎಂಬವರನ್ನು ಬಂಧಿಸಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.