ರಾಯಚೂರು: ಏಳು ಜನರ ಗುಂಪು ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸೊಸೈಟಿ ಕ್ಯಾಂಪ್ ಬಳಿ ನಡೆದಿದೆ.
41 ವರ್ಷದ ಕ್ಯಾಂಪ್ ನಿವಾಸಿ ರಾಜಪ್ಪ ಕೊಲೆಯಾದ ವ್ಯಕ್ತಿ. ಅದೇ ಕ್ಯಾಂಪ್ ನ 7 ಜನರು ಗಲಾಟೆ ಮಾಡೊ ರಾಜಪ್ಪ ಮೇಲೆ ಹಲ್ಲೆ ನಡೆಸಿ, ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಗಲಾಟೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಾಜಪ್ಪನನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕವಿತಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.