ವಿಜಯನಗರ : ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣ ರಾಜ್ಯವ್ಯಾಪ್ತಿ ಸುದ್ದಿಯಾಗಿತ್ತು, ಈ ಬೆನ್ನಲ್ಲೇ ವಿಜಯನಗರ ಜಿಲ್ಲೆಯ ಹೊಸಪೇಟೆಯ ಮಹಿಳೆ ಕೊಪ್ಪಳದಲ್ಲಿ ಮೃತಪಟ್ಟಿದ್ದಾರೆ.
ಐಶ್ವರ್ಯ ಎಂಬಾಕೆ ಮೃತಪಟ್ಟ ಮಹಿಳೆಯಾಗಿದ್ದಾರೆ. ಫುಡ್ ಫಾಯ್ಸನ್ ನಿಂದ ಈಕೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಡಿ.20 ರಂದು ಐಶ್ವರ್ಯಾಗೆ ಹೊಸಪೇಟೆಯ ತಾಯಿ ಮತ್ತು ಮಗು ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು, ನಂತರ ಇಡ್ಲಿ ತಿಂದು ಫುಡ್ ಫಾಯ್ಸನ್ ಆಗಿದೆ ಎನ್ನಲಾಗಿದೆ. ನಂತರ ಅವರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಅವರು ಡಿ.26 ರಂದು ಮೃತಪಟ್ಟಿದ್ದಾರೆ. ಬಾಣಂತಿ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.