ಬೆಂಗಳೂರು: ವರಾಹಿ ವರ್ಲ್ಡ್ ಆಫ್ ಜ್ಯುವೆಲ್ಲರಿ ಶಾಪ್ ಮಾಲಕಿ ವನಿತಾ ಐತಾಳ್ ಅವರಿಗೆ ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ಐಶ್ವರ್ಯಾ ಗೌಡ ಎಂಬ ಮಹಿಳೆ ಚಿನ್ನ ಖರೀದಿಸಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಡಿ.ಕೆ.ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಸುರೇಶ್, ನನ್ನ ಹೆಸರು ದುರುಪಯೋಗಪಡಿಸಿಕೊಂಡು ವಂಚನೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ನೋಡಿದ್ದೇನೆ. ಪೊಲೀಸ್ ಕಮಿಷನರ್ ಅವರಿಗೂ ಶೀಘ್ರದಲ್ಲೇ ದೂರು ನೀಡುತ್ತೇನೆ. ಯಾರೇ ಆಗಲಿ ನನ್ನ ಹೆಸರು ಬಳಸಿಕೊಂಡು ವಂಚನೆ ಮಾಡಿದರೂ ಈ ಬಗ್ಗೆ ತನಿಖೆಯಾಗಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದರು.
ಯಾರಿಗೆ ಅನ್ಯಾಯವಾಗಿದೆ ಅವರಿಗೆ ನ್ಯಾಯ ಕೊಡಿಸಿ ಎಂದು ಪತ್ರ ಬರೆಯುತ್ತೇನೆ. ಒದೆರಡು ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನ ಮಾಡಿದ್ದರು. ಅವುಗಳಿಗೆ ಹೋಗಿದ್ದೆ ಅಷ್ಟೇ ಬಿಟ್ಟರೆ ನನಗೂ ಅವರಿಗೂ ಯಾವುದೇ ಸಂಬಂಧವಿಲ್ಲ. ನನಗಿರೋದು ಒಬ್ಬಳೇ ತಂಗಿ ಎಂದು ಹೇಳಿದರು. ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಕಮಿಷನರ್ ಅವರಿಗೆ ಪತ್ರ ಬರೆಯುತ್ತಿದ್ದೇನೆ ಎಂದರು.