ಬೀದರ್: ಆನ್ ಲೈನ್ ಗೇಮ್ ಸುಳಿಗೆ ಸಿಲುಕಿದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ಜಿಲ್ಲೆಯ ಬಾಲ್ಕಿ ತಾಲೂಕಿನ ಜ್ಯೋತಿ ತಾಂಡಾದಲ್ಲಿ ನಡೆದಿದೆ
ವಿಜಯ್ ಕುಮಾರ್ ಜಗನ್ನಾಥ್ ಹೊಳ್ಳೆ ಆತ್ಮಹತ್ಯೆಗೆ ಶರಣಾಗಿರುವ ಯುವಕ. ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ಯುವಕನನ್ನು ರಕ್ಷಿಸಿ ಮಹಾರಾಷ್ಟ್ರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವನ್ನಪ್ಪಿದ್ದಾನೆ.
ಆನ್ ಲೈನ್ ಗೇಮಿನ ಗೀಳಿಗೆ ಬಿದ್ದು ವಿಜಯ್ ಕುಮಾರ್ ಸಾಕಷ್ಟು ಸಾಲ ಮಾಡಿಕೊಂಡಿದ್ದ. ಇದೇ ನೋವಿನಿಂದ ಆತ್ಮಹತ್ಯೆಗೆ ಯತ್ನಿಸಿದ್ದ. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ.