ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ, ಚಿಕ್ಕಪ್ಪ, ಅಜ್ಜನನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪದೇಶದಲ್ಲಿ ನಡೆದಿದೆ.
ಸಂತ್ರಸ್ತ ಬಾಲಕಿ ಉತ್ತರ ಪ್ರದೇಶದ ಬಿಧುವಾ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಹಲವು ತಿಂಗಳಿಂದ ತಂದೆ, ಚಿಕ್ಕಪ್ಪ, ಅಜ್ಜ ತನ್ನನ್ನು ಲೈಂಗಿಕವಾಗಿ ಶೋಷಿಸುತ್ತಿರುವುದಾಗಿ ಹೇಳಿದ್ದಳು. ಬಾಲಕಿಯ ವೈದ್ಯಕೀಯ ತಪಾಸಣೆ ನಡೆಸಿದಾಗ ಆಕೆ ಎರಡು ತಿಂಗಳ ಗರ್ಭಿಣಿ ಎಂಬುದು ತಿಳಿದುಬಂದಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅಲೋಕ್ ಮಿಶ್ರಾ ತಿಳಿಸಿದ್ದಾರೆ.
ಘಟನೆ ಸಂಬಂಧ ಸಂತ್ರಸ್ತ ಬಾಲಕಿಯ ತಂದೆ, ಚಿಕ್ಕಪ್ಪ, ಅಜ್ಜನನ್ನು ಬಂಧಿಸಿ ಸ್ಥಳೀಯ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಗಳ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.