ಚಿತ್ರದುರ್ಗ: ಬೆಲಗೂರು ಬಳಿ ಟಾಟಾ ಏಸ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಬೆಲಗೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ.
ಬೆಲಗೂರು ಗ್ರಾಮದ ಪ್ರಕಾಶ್(25), ಮಾರುತಿ(25) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಶ್ರೀರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.