SHOCKING: ಮೂರನೇ ಹೆಣ್ಣುಮಗುವಿಗೆ ಜನ್ಮ ನೀಡಿದ ಪತ್ನಿಗೆ ಬೆಂಕಿ ಹಚ್ಚಿ ಕೊಂದ ರಾಕ್ಷಸ ಪತಿ

ಮುಂಬೈ: ಮಹಾರಾಷ್ಟ್ರದ ಪರ್ಭಾನಿಯಲ್ಲಿ ವ್ಯಕ್ತಿಯೊಬ್ಬ ಮೂರನೇ ಮಗಳಿಗೆ ಜನ್ಮ ನೀಡಿದ್ದಕ್ಕಾಗಿ ಪತ್ನಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಆರೋಪಿಯನ್ನು 32 ವರ್ಷದ ಕುಂಡ್ಲಿಕ್ ಉತ್ತಮ್ ಕಾಳೆ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಮುಂಬೈನಿಂದ 520 ಕಿಲೋಮೀಟರ್ ದೂರದಲ್ಲಿರುವ ಗಂಗಾಖೇಡ್ ನಾಕಾದಲ್ಲಿ ಆರೋಪಿ ತನ್ನ ಪತ್ನಿ ಮೈನಾ ಮೇಲೆ ಪೆಟ್ರೋಲ್ ಸುರಿದಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿಯು ಮೂರು ಹೆಣ್ಣು ಮಕ್ಕಳಿಗೆ ಜನ್ಮ ನೀಡುವ ವಿಚಾರದಲ್ಲಿ ಪತ್ನಿಯನ್ನು ನಿಂದಿಸುತ್ತಿದ್ದ ಮತ್ತು ಈ ವಿಚಾರವಾಗಿ ಆಕೆಯೊಂದಿಗೆ ಆಗಾಗ್ಗೆ ಜಗಳವಾಡುತ್ತಿದ್ದ ಎಂದು ಸಂತ್ರಸ್ತೆಯ ಸಹೋದರಿ ಮುಂಬೈ ಪೊಲೀಸರಿಗೆ ಲಿಖಿತ ದೂರಿನಲ್ಲಿ ತಿಳಿಸಿದ್ದಾರೆ.

ಗುರುವಾರ ರಾತ್ರಿ ಜಗಳದ ಸಂದರ್ಭದಲ್ಲಿ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಅವಳು ಕಿರುಚುತ್ತಾ ಮನೆಯಿಂದ ಹೊರಗೆ ಓಡಿಹೋದಳು, ಅಲ್ಲಿ ಜನ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರಾರೂ ಅವಳು ತೀವ್ರವಾಗಿ ಸುಟ್ಟುಹೋಗಿದ್ದು, ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾಳೆ. ಕೊಲೆ ಆರೋಪಿ ಕಾಳೆಯನ್ನು ಬಂಧಿಸಲಾಗಿದೆ ಎಂದು ಗಂಗಾಖೇಡ್ ಪೊಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read