ಶಿವಮೊಗ್ಗ: ಕಾರ್ ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಆನಂದಪುರ ಸಮೀಪ ಇಂದು ಬೆಳಿಗ್ಗೆ ನಡೆದಿದೆ.
ಸಾಗರದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಕಾರ್ ಹಾಗೂ ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಬಸ್ ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಕಾರ್ ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಆನಂದಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.