ಬೆಂಗಳೂರು: ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬ ತನ್ನ ಸ್ನೇಹಿತನನ್ನೇ ವಾಟರ್ ಹೀಟರ್ ನಿಂದ ಹೊಡೆದು ಹತ್ಯೆಗೈದಿರುವ ಘಟನೆ ನಡೆದಿದೆ.
ಶ್ರೀನಿವಾಸ್ ಕೊಲೆಯಾಗಿರುವ ವ್ಯಕ್ತಿ. ನಾಗರಾಜ್ ಸ್ನೇಹಿತನನ್ನೇ ಕೊಂದ ಆರೋಪಿ. ಶ್ರೀನಿವಾಸ್ ಹಾಗೂ ನಾಗರಾಜ್ ಎಂಬ ಇಬ್ಬರು ಗಾರೆ ಕೆಲಸ ಮಾಡಿಕೊಂಡಿದ್ದರು. ಶ್ರೀನಿವಾಸ್ ಮದುವೆಯಾಗಿದ್ದರೂ ಪತ್ನಿಯನ್ನು ಬಿಟ್ಟು ಪ್ರತ್ಯೇಕವಾಗಿ ವಾಸವಾಗಿದ್ದ. ಕೊಲೆ ಆರೋಪಿ ನಾಗರಾಜ್ ಗೆ ಇನ್ನೂ ಮದುವೆಯಾಗಿರಲಿಲ್ಲ.
ಇಬ್ಬರೂ ಶ್ರೀನಿವಾಸಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಶ್ರೀನಿವಾಸ್, ನಾಗರಾಜ್ ನ ಮೊಬೈಲ್ ತೆಗೆದುಕೊಂಡು ನೋಡುತ್ತಿದ್ದರು. ಅಲ್ಲದೇ ರೂಂ ಕೀಯನ್ನು ಸರಿಯಾಗಿ ತನಗೆ ಕೊಡುತ್ತಿರಲಿಲ್ಲ ಎಂಬ ಕೋಪದಲ್ಲಿ ಇಬ್ಬರ ನಡುವೆ ಜಗಳವಾಗಿದೆ. ಕೋಪದ ಬರದಲ್ಲಿ ವಾಟರ್ ಹೀಟರ್ ನಿಂದ ನಾಗರಾಜ್, ಶ್ರೀನಿವಾಸ್ ಮೇಲೆ ಹಲ್ಲೆ ಮಾಡಿದ್ದಾನೆ.