ಬೆಳಗಾವಿ: ಮನೆಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿವೆ.
ಬೆಳಗಾವಿ ಜಿಲ್ಲೆಯ ಸಂಬ್ರಾ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. 32 ವರ್ಷದ ಸವಿತಾ ಜೋಗಾಣಿ ಮನೆಯ ಬೆಡ್ ರೂಂ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಕ್ಷಣ ಮನೆಯವರು ಸವಿತಾಳ ಶವ ಬಿಮ್ಸ್ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಸವಿತಾ ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ.
ಸವಿತಾ ಪೋಷಕರು ಸವಿತಾ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.