ವಿಜಯನಗರ: ಬಳ್ಳಾರಿ, ಬೆಳಗಾವಿಯಲ್ಲಿ ಬಾಣಂತಿಯರ ಸಾವಿನ ಸರಣಿ ಘಟನೆ ಬಳಿಕ ಬೆಂಗಳೂರಿನಲ್ಲಿಯೂ ಇಬ್ಬರು ಬಾಣಂತಿಯರು ಸಾವನ್ನಪ್ಪಿದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಘಟನೆ ಬೆನ್ನಲ್ಲೇ ಇದೀಗ ವಿಜಯನಗರದಲ್ಲಿ ಬಾಣಂತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ವಿಜಯನಗರದ ಸರ್ಕಾರಿ ತಾಯಿ ಹಾಗೂ ಮಕ್ಕಳ ಆಸ್ಪತ್ರೆಯಲ್ಲಿ ಸಿಸೇರಿಯನ್ ಬಳಿಕ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ. ಹೆರಿಗೆಯಾದ ಐದು ದಿನಗಳ ಬಳಿಕ ಬಾಣಂತಿ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
20 ವರ್ಷದ ಐಶ್ವರ್ಯ ಮೃತ ಬಾಣಂತಿ. ಬಾಣಂತಿಯಾದ ಬಳಿಕ ವಾಂತಿ-ಬೇಧಿಯಿಂದ ಬಳಲುತ್ತಿದ್ದರು. ಐದು ದುಇನಗಳ ಬಳಿಕ ಸಾವನ್ನಪ್ಪಿದ್ದಾರೆ. ಪೋಷಕರು ವೈದ್ಯರ ನಿರ್ಲಕ್ಷ್ಯ ಎಂದು ಆರೋಪಿಸಿದ್ದು, ಜಿಲ್ಲಾ ಆರೋಗ್ಯಾಧಿಕಾರಿಗಳು ತನಿಖೆಗೆ ಆದೇಶ ನೀಡಿದ್ದಾರೆ.