ಶಿವಮೊಗ್ಗ: ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ.
ದೊಡ್ಡಬಳ್ಳಾಪುರ ಮೂಲದ ಶರಣ್ ಹಾಗೂ ಅಕ್ಷಯ್ ಮೃತ ದುರ್ದೈವಿಗಳು. ಶಿವಮೊಗ್ಗ ಕಡೆಯಿಂದ ಹೊನ್ನಾವರ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ದುರಂತ ನಡೆದಿದೆ.
ಘಟನಾ ಸ್ಥಳಕ್ಕೆ ಆನಂದಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.