ಬೀದರ್: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಸಚಿನ್ ಕುಟುಂಬದವರಿಗೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.
ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಕಟ್ಟಿತೂಗಾಂವ್ ಗ್ರಾಮದಲ್ಲಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ನಿರ್ಲಕ್ಷ್ಯ ವಹಿಸಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸದ್ಯ ಪ್ರಕರಣವನ್ನು ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಸಚಿನ್ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಈಶ್ವರ್ ಖಂಡ್ರೆ ಪರಿಹಾರ ಘೋಷಣೆ ಮಾಡಿದ್ದಾರೆ.