ಶ್ರೀನಗರ ಕಿಟ್ಟಿ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಸಂಜು ವೆಡ್ಸ್ ಗೀತಾ 2’ ಚಿತ್ರದ ‘ಮಳೆಯಂತೆ ಬಾ’ ಎಂಬ ವಿಡಿಯೋ ಹಾಡು ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ.
ಸಂಗೀತಾ ರವೀಂದ್ರನಾಥ್ ಈ ಹಾಡಿಗೆ ಧ್ವನಿಯಾಗಿದ್ದು, ವಿ. ಶ್ರೀಧರ್ ಸಂಗೀತ ಸಂಯೋಜನೆ ನೀಡಿದ್ದಾರೆ. ಇನ್ನುಳಿದಂತೆ ಕವಿರಾಜ್ ಅವರ ಸಾಹಿತ್ಯವಿದೆ.
ಈ ಚಿತ್ರವನ್ನು ನಾಗಶೇಖರ್ ಮೂವೀಸ್ ಪ್ರೊಡಕ್ಷನ್ಸ್ ಹಾಗೂ ಮಹಾನದಿ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ಚಲವಾದಿ ಕುಮಾರ್ ನಿರ್ಮಾಣ ಮಾಡಿದ್ದು, ಇಮ್ರಾನ್ ಸರ್ದಾರಿಯಾ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ಅಂಥೋನಿ ಸಂಕಲನ, ಸತ್ಯ ಹೆಗಡೆ ಛಾಯಾಗ್ರಹಣ,ಇಮ್ರಾನ್ ಸರ್ದಾರಿಯಾ ಅವರ ನೃತ್ಯ ಸಂಯೋಜನೆ ಇದೆ.