HomeKarnatakaBIG NEWS: ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ವಿಜಯಪುರ ಬಂದ್

BIG NEWS: ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ವಿಜಯಪುರ ಬಂದ್

ವಿಜಯಪುರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ವಿರೋಧಿಸಿ ದಲಿತಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳಿಂದ ಇಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ ವಿಜಯಪುರ ಜಿಲ್ಲೆ ಬಂದ್ ಗೆ ಕರೆ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಗರದ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಇಂದು ರಾತ್ರಿಯವರೆಗೂ ಮದ್ಯ ಮಾರಾಟ ನಿಷೇಧಿಸಲಾಗಿದೆ. ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿದ್ದಾರೆ.

ಜಿಲ್ಲೆಯಲ್ಲಿ ಇಂದು ನಡೆಯಬೇಕಿದ್ದ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular