HomeKarnatakaದಾರುಣ ಘಟನೆ: ಬಿಸಿ ಗಂಜಿ ಪಾತ್ರೆಗೆ ಬಿದ್ದು ಎರಡು ವರ್ಷದ ಮಗು ಸಾವು

ದಾರುಣ ಘಟನೆ: ಬಿಸಿ ಗಂಜಿ ಪಾತ್ರೆಗೆ ಬಿದ್ದು ಎರಡು ವರ್ಷದ ಮಗು ಸಾವು

ಕಾರವಾರ: ಬಿಸಿ ಗಂಜಿ ಪಾತ್ರೆಗೆ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನಲ್ಲಿ ನಡೆದಿದೆ.

ಬೀರು ಲಂಬೋರ್ ಅವರ ಪುತ್ರ ಕೃಷ್ಣ ಲಂಬೋರ್(2) ಮೃತಪಟ್ಟ ಮಗು. ನಾಯಿಗಳ ಆಹಾರಕ್ಕಾಗಿ ಬೇಯಿಸುತ್ತಿದ್ದ ಗಂಜಿ ಬೋಗಣಿಗೆ ಬಿದ್ದು ಮಗು ಮೃತಪಟ್ಟಿದೆ.

ಬೀರು ಲಂಬೋರ್ ಅವರು ಸಾಕಿದ ನಾಯಿಗಳಿಗೆ ನೀಡಲು ಗಂಜಿ ಬೇಯಿಸುತ್ತಿದ್ದರು. ಈ ವೇಳೆ ಅಲ್ಲಿ ಆಟವಾಡುತ್ತಿದ್ದ ಅವರ ಎರಡು ವರ್ಷದ ಮಗ ಕುದಿಯುತ್ತಿದ್ದ ಗಂಜಿ ಬೋಗಣಿಯಲ್ಲಿ ಬಿದ್ದು ಮೈ ಕೈ ಸುಟ್ಟುಕೊಂಡಿದೆ. ತಕ್ಷಣ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ತೋರಿಸಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular