ಉಡುಪಿ : ರಾಜ್ಯದಲ್ಲಿ ವಿಚಿತ್ರ ಘಟನೆಯೊಂದು ನಡೆದಿದ್ದು, ಆತ್ಮಹತ್ಯೆಗೆ ಯತ್ನಿಸುವಾಗ ನೇಣು ಕುಣಿಕೆ ತುಂಡಾಗಿ ಕೆಳಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ.
ಉಡುಪಿಯ ಮಣಿಪಾಲ್ ನಲ್ಲಿ ಈ ಘಟನೆ ನಡೆದಿದೆ. ಮೃತರನ್ನ ನವಗ್ರಹ ತಾಲೂಕಿ ನಿವಾಸಿ ಮಿಲ್ರಾನ್ ಎಂದು ಗುರುತಿಸಲಾಗಿದೆ.
ಮೊದಲನೇ ಅಂತಸ್ಥಿನ ಮೇಲ್ಙಾವಣಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸುವಾಗ ನೇಣಿಗೆ ಕುಣಿಗೆ ತುಂಡಾಗಿ ಕೆಳಗೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮಿಲ್ರಾನ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.