ಉಡುಪಿ: ಸಮುದ್ರಕ್ಕೆ ಸ್ನಾನಕ್ಕೆಂದು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿಯಲ್ಲಿ ನಡೆದಿದೆ.
ಎಳ್ಳಮವಾಸ್ಯೆ ಹಿನ್ನೆಲೆಯಲ್ಲಿ 6 ಜನರು ಸಮುದ್ರ ಸ್ನಾನಕ್ಕೆಂದು ನೀರಿಗಿಳಿದಿದ್ದರು. ಈ ವೇಳೆ ಇಬ್ಬರು ಯುವಕರು ನೀರಿನಲ್ಲಿ ಮುಳುಗಿದ್ದಾರೆ. ಈ ವೇಳೆ ಸ್ಥಳೀಯರು ಯುವಕರನ್ನು ರಕ್ಷಿಸಲು ಯತ್ನಿಸಿದ್ದಾರೆ. ನಾಲ್ವರನ್ನು ರಕ್ಷಿಸಿದ್ದಾರೆ. ಆದರೆ ನೀರಿನಲ್ಲಿ ಮುಳುಗಿದ್ದ ಇಬ್ಬರು ಯುವಕರನ್ನು ರಕ್ಷಿಸಲು ಸಾಧ್ಯವಾಗಿಲ್ಲ.
ನಾಲ್ವರು ತೀವ್ರ ಅಸ್ವಸ್ಥರಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಡುಬಿದ್ರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.