alex Certify ಮಾ. 14 ರಂದು ರಾಜ್ಯ ಬಜೆಟ್: ದಾಖಲೆಯ 16ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾ. 14 ರಂದು ರಾಜ್ಯ ಬಜೆಟ್: ದಾಖಲೆಯ 16ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾರ್ಚ್ 10ರಿಂದ ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 14 ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದಾರೆ.

ಜಂಟಿ ಅಧಿವೇಶನದ ಮುಂದುವರೆದ ಭಾಗವಾಗಿ ಬಜೆಟ್ ಅಧಿವೇಶನ ನಡೆಯಲಿದೆ. ಒಟ್ಟು 3 ವಾರಗಳ ಕಾಲ ಅಧಿವೇಶನ ನಡೆಸಲು ಉದ್ದೇಶಿಸಲಾಗಿದೆ. ಜನವರಿ 2ರಂದು ಹೊಸ ವರ್ಷದ ಮೊದಲ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಬಗ್ಗೆ ಅಧಿಕೃತ ನಿರ್ಣಯ ಹೊರಬೀಳಲಿದೆ.

ಜನವರಿ ಅಥವಾ ಫೆಬ್ರವರಿಯಲ್ಲಿ ಜಂಟಿ ಅಧಿವೇಶನ ನಡೆಸುವ ಸಂಪ್ರದಾಯ ಇದೆಯಾದರೂ ಚಳಿಗಾಲದ ಅಧಿವೇಶನ ಈಗಷ್ಟೇ ಮುಕ್ತಾಯವಾಗಿರುವುದರಿಂದ ಬಜೆಟ್ ಅಧಿವೇಶನದ ಪೂರ್ವದಲ್ಲಿ ಮಾರ್ಚ್ 10ರಿಂದ 4 ದಿನಗಳ ಕಾಲ ಜಂಟಿ ಅಧಿವೇಶನ ನಡೆಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...