alex Certify ಬೆಂಗಳೂರಿಗರೇ ಎಚ್ಚರ : ಹೊಸ ವರ್ಷಾಚರಣೆ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ |New Year Celebration | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗರೇ ಎಚ್ಚರ : ಹೊಸ ವರ್ಷಾಚರಣೆ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ |New Year Celebration

ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಸಾರ್ವಜನಿಕರು ತಮ್ಮ ಸುರಕ್ಷತೆ ಬಗ್ಗೆ ಜಾಗೃತಿ ವಹಿಸಬೇಕು. ಬೇರೆಯವರಿಗೆ ತೊಂದರೆಯಾಗದಂತೆ ನಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಸಂಭ್ರಮಾಚರಣೆಯಲ್ಲಿ ಪಟಾಕಿಗಳನ್ನು ಸಿಡಿಸುವಂತಿಲ್ಲ. ಅತಿವೇಗ, ಅಜಾಗರೂಕತೆಯಿಂದ ವಾಹನ ಚಲಾಯಿಸಬಾರದು. ನಿರ್ಬಂಧಿತ ಪ್ರದೇಶಗಳಿಗೆ ಪ್ರವೇಶಿಸಬಾರದು. ಮೋಜಿಗಾಗಿ ತುರ್ತು ಕರೆಗಳಿಗೆ ಸಂಪರ್ಕಿಸಬಾರದು. ಅನವಶ್ಯಕವಾಗಿ ಗುಂಪುಗೂಡಬಾರದು ಎಂದು ಬೆಂಗಳೂರು ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ.

ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಡಿಸೆಂಬರ್ 31ರ ರಾತ್ರಿ 1ರ ವರೆಗೆ ಸಾರ್ವತ್ರಿಕವಾಗಿ ಹೊಸ ವರ್ಷ ಆಚರಿಸಲು ಅನುಮತಿಯಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತರಾದ ಬಿ.ದಯಾನಂದ್ ಅವರು ತಿಳಿಸಿದ್ದಾರೆ.

ಹೊಸ ವರ್ಷಾಚರಣೆ ವೇಳೆ ಸಾರ್ವಜನಿಕರು ಒಟ್ಟಾಗಿ ಸೇರುವುದರಿಂದ ಅಪಘಾತಗಳು ಸೇರಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಡಿಸೆಂಬರ್ 31 ರಂದು ರಾತ್ರಿ 11 ರಿಂದ ಜನವರಿ 1ರ ಬೆಳಗ್ಗೆ 6ರ ವರೆಗೆ ಬೆಂಗಳೂರು ನಗರದ ಎಲ್ಲಾ ಮೇಲ್ಸೇತುವೆಗಳಲ್ಲಿ (ಕೆಐಎ ವಿಮಾನ ನಿಲ್ದಾಣಕ್ಕೆ ಹೋಗುವ ಎಲಿವೇಟೆಡ್ ಎಕ್ಸ್ಪ್ರೆಸ್ವೇ ಹೊರತುಪಡಿಸಿ) ಎಲ್ಲಾ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ವಿಮಾನ ನಿಲ್ದಾಣದ ಎಲಿವೇಟೆಡ್ ಎಕ್ಸ್ಪ್ರೆಸ್ವೇಯಲ್ಲಿ ದ್ವಿಚಕ್ರ ವಾಹನಗಳ ಸಂಚಾರವನ್ನು ಡಿಸೆಂಬರ್ 31ರ ರಾತ್ರಿ 10 ರಿಂದ ಜನವರಿ 1ರ ಬೆಳಗ್ಗೆ 6 ಗಂಟೆಯವರೆಗೂ ನಿರ್ಬಂಧಿಸಲಾಗಿದೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಎಂ.ಎನ್.ಅನುಚೇತ್ ಅವರು ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...