ಉತ್ತರ ಕನ್ನಡ : ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸಾವನ್ನಪ್ಪಿದ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ.
ವಿಜಯಪುರದಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ರಾಘವೇಂದ್ರ ಸೋಮಯ್ಯಗೌಡ (34) ಸಂಶಿಯ ಗೌರೀಶ ನಾಯ್ಕ (25) ಖರ್ವಾದ ರಮೇಶ ನಾಯ್ಕ (22) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಮಂಕಿ ಕಡೆಯಿಂದ ಹೊನ್ನಾವರ ಪಟ್ಟಣಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.