ಬೆಂಗಳೂರು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಹೊಸ ವರ್ಷವನ್ನು ಬರ ಮಾಡಿಕೊಳ್ಳಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಹೊಸ ವರ್ಷದ ಸಂಭ್ರಮಾಚರಣೆಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸ ಕೈಗೊಂಡಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತ ವಿದೇಶ ಪ್ರವಾಸಕ್ಕೆ ತೆರಳಿದ್ದು, ವಿದೇಶದಲ್ಲಿ ಈ ಬಾರಿ ನ್ಯೂ ಇಯರ್ ಸೆಲೆಬ್ರೇಟ್ ಮಾಡಲಿದ್ದಾರೆ.
ಇಂದು ಮುಂಜಾನೆಯೇ ಡಿಸಿಎಂ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ನಾಲ್ಕು ದಿನಗಳಕಾಲ ಡಿಸಿಎಂ ವಿದೇಶದಲ್ಲಿರಲಿದ್ದಾರೆ. ಕೆನಡಾ, ಟರ್ಕಿ ಪ್ರವಾಸ ಕೈಗೊಂಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಫ್ಯಾಮಿಲಿ, ವಿದೇಶದಲ್ಲಿ ಹೊಸ ವರ್ಷಾಚರಣೆ ಮಾಡಲಿದೆ.
ವಿದೇಶ ಪ್ರವಾಸದಿಂದ ಜನವರಿ 4 ರಂದು ಡಿ.ಕೆ.ಶಿವಕುಮಾರ್ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.