ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಎಂಎಲ್ ಸಿ ರವಿಕುಮಾರ್ ನೇತೃತ್ವದಲ್ಲಿ ಪೋಸ್ಟರ್ ಅಭಿಯಾನ ಆರಂಭವಾಗಿದೆ.
ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವಂತೆ ಆಗ್ರಹಿಸಿ, ಸಚಿವರ ವಿರುದ್ಧ ಬಿಜೆಪಿ ಮುಖಂಡರು ಪೋಸ್ಟರ್ ಅಭಿಯಾನ ಆರಂಭಿಸಿದ್ದಾರೆ.
ಬೆಂಗಳೂರಿನ ವಿವಿಧೆಡೆ ಎಂಎಲ್ ಸಿ ರವಿ ಕುಮಾರ್, ಸಿ.ಟಿ.ರವಿ ಸೇರಿದಂತೆ ಹಲವು ಮುಖಂಡರು ಗೋಡೆಗಳಿಗೆ ಪೋಸ್ಟರ್ ಅಂಟಿಸಿ ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪೋಸ್ಟರ್ ಅಭಿಯಾನ ತೀವ್ರಗೊಳ್ಳುತ್ತಿದ್ದಂತೆ ಪೊಲೀಸರು ಬಿಜೆಪಿ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.