ಬೆಂಗಳೂರು : ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಧ್ಯಾಹ್ನದಿಂದಲೇ ಮದ್ಯ ಖರೀದಿ ಜೋರಾಗಿದೆ.
ಬೆಂಗಳೂರಿನ ಮದ್ಯ ಪ್ರಿಯರು ಮಧ್ಯಾಹ್ನದಿಂದಲೇ ಮದ್ಯ ಖರೀದಿಯಲ್ಲಿ ತೊಡಗಿದ್ದು, ಬಾರ್, ರೆಸ್ಟೋರೆಂಟ್, ವೈನ್ ಶಾಪ್ ನಲ್ಲಿ ಜನಜಂಗುಳಿ ಜೋರಾಗಿದೆ.
ಈ ಬಾರಿ ಹೊಸ ವರ್ಷಾಚರಣೆ ವೇಳೆ ಒಂದು ದಿನದ ಮಧ್ಯ ಮಾರಾಟಕ್ಕೆ ಲೈಸೆನ್ಸ್ ನೀಡುವ ಪದ್ಧತಿಗೆ ಸರ್ಕಾರ ಬ್ರೇಕ್ ಹಾಕಿದೆ. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನ ಹಿನ್ನೆಲೆಯಲ್ಲಿ ದೇಶಾದ್ಯಂತ 7 ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ. ಹಾಗಾಗಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಒಂದು ದಿನದ ಮದ್ಯ ಪರವಾನಿಗೆ ನೀಡಲು ಸರ್ಕಾರ ನಿರಾಕರಿಸಿದೆ. ಹೊಸ ವರ್ಷಾಚರಣೆಗಾಗಿ ಬೆಂಗಳೂರು ನಗರ, ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಕೋರಮಂಗಲ, ಇಂದಿರಾನಗರ ಸೇರಿದಂಎ ಹೋಟೆಲ್, ರೆಸ್ಟೋರೆಂಟ್, ಪಬ್ ಗಳು ಸಜ್ಜಾಗಿವೆ. ಇವುಗಳ ಜೊತೆಗೆ ಒಂದು ದಿನದ ಮದ್ಯ ಮಾರಾಟಕ್ಕೆ ಲೈಸೆನ್ಸ್ ಪಡೆಯುವವರು ಸಿದ್ಧತೆ ಅಡಿಕೊಂಡಿದ್ದರು. ಆದರೆ ಕೊನೇ ಕ್ಷಣದಲ್ಲಿ ಲೈಸೆನ್ಸ್ ಸಿಗದೇ ಪರದಾಟ ನಡೆಸಿದ್ದಾರೆ.