ಬೆಂಗಳೂರು : ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ಪಾರ್ಟಿ ಮಾಡಿ ನೀವು ಕುಡಿದು ಗಾಡಿ ಚಲಾಯಿಸಿದ್ರೆ ಪೊಲೀಸರು ನಿಮ್ಮ ಗಾಡಿಯನ್ನು ಸೀಜ್ ಮಾಡಿ ಕೇಸ್ ಹಾಕಲಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ.
ಡಿ.31ರ ರಾತ್ರಿ ಡ್ರಿಂಕ್ ಅಂಡ್ ಡ್ರೈವ್ ಪ್ರಕರಣಗಳನ್ನು ಪರಿಶೀಲಿಸಲು ಪೊಲೀಸರು ಬೆಂಗಳೂರಿನಲ್ಲಿ ಚೆಕ್ ಪೋಸ್ಟ್ ಗಳನ್ನು ಗುರುತಿಸಿದ್ದಾರೆ.ಬೆಂಗಳೂರು ನಗರದಾದ್ಯಂತ ಪೊಲೀಸರು ವಾಹನಗಳನ್ನು ತಪಾಸಣೆ ಮಾಡುತ್ತಿದ್ದು, ಕುಡಿದು ವಾಹನ ಚಲಾಯಿಸಿ ಪೊಲೀಸರಿಗೆ ಸಿಕ್ಕಿಬಿದ್ದರೆ ದಂಡ ವಿಧಿಸಿ ಗಾಡಿಯನ್ನು ಸೀಜ್ ಮಾಡಲಾಗುತ್ತದೆ, ನಂತರ ನೀವು ಕೋರ್ಟ್ ನಲ್ಲಿ ದಂಡ ಪಾವತಿ ಮಾಡಿ ವಾಹನ ಬಿಡಿಸಿಕೊಳ್ಳಬೇಕಾಗುತ್ತದೆ.
ದಿ: 29-12-2024 ರಂದು ಉತ್ತರ ವಿಭಾಗದ ಟ್ರಾಫಿಕ್ನಲ್ಲಿ ಮಧ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ಚಾಲಕರು & ಪ್ರಯಾಣಿಕರ ವಿರುದ್ಧ ವಿಶೇಷ ಕಾರ್ಯಾಚರಣೆಯನ್ನು ನಡೆಸಲಾಯಿತು ಮತ್ತು 2745 ವಾಹನಗಳನ್ನು ಪರಿಶೀಲಿಸಿ, 46 ಜನರನ್ನು ಪತ್ತೆಹಚ್ಚಲಾಯಿತು. ಮಧ್ಯದ ಅಮಲಿನಲ್ಲಿದ್ದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೂತನ ವರ್ಷಾಚರಣೆ ವೇಳೆಯಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ಮುಖ್ಯರಸ್ತೆಗಳಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳು ವಿಶೇಷ ಕಾರ್ಯಚರಣೆಯನ್ನು ಹಮ್ಮಿಕೊಳ್ಳುತ್ತಿದ್ದು, ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. pic.twitter.com/5Rhaq0HCm0
— K.R.PURA TRAFFIC POLICE.BENGALURU. (@KRPURATRAFFIC) December 30, 2024