ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶಾದ್ಯಂತ ಹೊಸ ವರ್ಷದ ಸಂಭ್ರಮಾಚರಣೆ ಮುಗಿಲುಮುಟ್ಟಿದೆ. 2024ಕ್ಕೆ ಗುಡ್ ಬೈ ಹೇಳಿ 2025 ಅನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಗಿದೆ. ಎಲ್ಲೆಲ್ಲೂ ಯುವಕರು ಸೇರಿದಂತೆ ಎಲ್ಲಾ ವರ್ಗದ ಜನ ಸಂಭ್ರಮಾಚರಣೆ ನಡೆಸಿದ್ದಾರೆ.
ಬೆಂಗಳೂರು, ಶಿವಮೊಗ್ಗ, ಬೆಳಗಾವಿ, ಹುಬ್ಬಳ್ಳಿ, ಮಂಗಳೂರು, ದಾವಣಗೆರೆ ಸೇರಿದಂತೆ ರಾಜ್ಯಾದ್ಯಂತ 2025 ಹೊಸ ವರ್ಷಕ್ಕೆ ಜನರು ಭರ್ಜರಿ ಸ್ವಾಗತ ಕೋರಿದ್ದು, ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಮ್ಯೂಸಿಕ್ ಅಬ್ಬರದೊಂದಿಗೆ ಕುಣಿದು ಕುಪ್ಪಳಿಸಿ ಹೊಸ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ.
ಬೆಂಗಳೂರಿನ ಕೋರಮಂಗಲ, ಚರ್ಚ್ ಸ್ಟೀಟ್, ಎಂ.ಜಿ. ರೋಡ್. ಕಮರ್ಷಿಯಲ್ ಸ್ಟ್ರೀಟ್, ಬ್ರಿಗೇಡ್ ರೋಡ್, ಸೇರಿದಂತೆ ರಾಜ್ಯಾದ್ಯಂತ ಹೊಸ ವರ್ಷವನ್ನು ಜನರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.
ಡಿಜೆ ಸದ್ದಿಗೆ ಜನರು ಹುಚ್ಚೆದ್ದು ಕುಣಿದು ಕುಪ್ಪಳಿಸಿ, ಪಟಾಕಿ ಸಿಡಿಸಿ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ. ಶುಭಾಶಯ ವಿನಿಮಯ ಮಾಡಿಕೊಂಡಿದ್ದಾರೆ.
ಇನ್ನು ಹೊಸ ವರ್ಷದ ಮೊದಲ ದಿನವಾದ ಇಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಹೆಚ್ಚಿನ ಸಂಖ್ಯೆಯ ಜನ ದೇವರ ದರ್ಶನ ಪಡೆಯಲು ಮುಂದಾಗಿದ್ದಾರೆ. ಹೊಸ ವರ್ಷದಲ್ಲಿ ಕೈಗೊಳ್ಳಲಿರುವ ಕೆಲಸ ಕಾರ್ಯಗಳು ಯಶಸ್ವಿಯಾಗಲಿ ಎಂದು ಪ್ರಾರ್ಥಿಸಲಿದ್ದಾರೆ.