ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿಯವರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದು ಕೆಲವು ತಿಂಗಳ ಹಿಂದೆ ನೀಡಿದ್ದ ಹೇಳಿಕೆ ಪರ ವಿರೋಧ ಚರ್ಚೆಗೆ ಕಾರಣವಾಗಿತ್ತು.
ಈ ಕುರಿತಾದ ಚರ್ಚೆಯ ವೇಳೆ ಖ್ಯಾತ ಉದ್ಯಮಿ ಗೌತಮ್ ಅದಾನಿ ಪ್ರತಿಕ್ರಿಯೆ ನೀಡಿದ್ದಾರೆ. ವಾರಕ್ಕೆ 70 ಗಂಟೆ ಕೆಲಸ ಮಾಡುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಹೆಂಡತಿ ಓಡಿ ಹೋಗುತ್ತಾಳೆ ಎಂದು ಹೇಳಿದ್ದಾರೆ.
ಖಾಸಗಿ ಮಾಧ್ಯಮದೊಂದಿಗೆ ಮಾತನಾಡಿದ ಗೌತಮ್ ಅದಾನಿ, ಖಾಸಗಿ ಬದುಕು ಮತ್ತು ಉದ್ಯೋಗವನ್ನು ಹೇಗೆ ಸರಿದೂಗಿಸಿಕೊಳ್ಳಬೇಕು ಎಂಬುದನ್ನು ಯಾರ ಮೇಲೆ ಹೇರಲು ಆಗುವುದಿಲ್ಲ. ಒಬ್ಬರು ಕುಟುಂಬದವರೊಂದಿಗೆ ನಾಲ್ಕು ಗಂಟೆ ಸಮಯ ಕಳೆಯಬಹುದು, ಇದರಿಂದ ಅವರು ಸಂತೋಷ ಪಡೆಯಬಹುದಾಗಿದೆ. ಕೆಲವರು ದಿನಕ್ಕೆ ಎಂಟು ಗಂಟೆ ಕೆಲಸ ಮಾಡಿ ಸಂತೋಷಪಡುತ್ತಾರೆ ಎಂದಿಟ್ಟುಕೊಳ್ಳೋಣ. ಆಗ ಪತ್ನಿ ಓಡಿ ಹೋಗುತ್ತಾಳೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.