ಬೆಂಗಳೂರು: ಮಾಜಿ ಸಂಸದ ಡಿ.ಕೆ. ಸುರೇಶ್ ಸೋದರಿ ಹೆಸರಲ್ಲಿ ವಾರಾಹಿ ಜ್ಯುವೆಲ್ಲರಿ ಶಾಪ್ ಮಾಲಕಿ ವನಿತಾ ಅವರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯಾ ಗೌಡ, ಹರೀಶ್ ಬಿಡುಗಡೆಗೆ ಹೈಕೋರ್ಟ್ ಆದೇಶ ನೀಡಿದ್ದು, ನಿನ್ನೆ ರಾತ್ರಿಯೇ ಜೈಲಿನಿಂದ ರಿಲೀಸ್ ಆಗಿದ್ದಾರೆ.
ಬಂಧನಕ್ಕೆ ಲಿಖಿತ ಕಾರಣಗಳನ್ನು ತಿಳಿಸದ ಹಿನ್ನೆಲೆಯಲ್ಲಿ ಬಿಡುಗಡೆಗೆ ಕೋರ್ಟ್ ಆದೇಶ ನೀಡಿತ್ತು, 41ಎ ಅಡಿ ನೋಟಿಸ್ ಗೆ ಹಾಜರಾದಾಗ ಬಂಧನದ ಹಿನ್ನೆಲೆಯಲ್ಲಿ ತಾಂತ್ರಿಕ ಕಾರಣ ಮುಂದೊಡ್ಡಿ ಹಿರಿಯ ವಕೀಲ ಸಂದೇಶ್ ಚೌಟ ಅವರು ವಾದ ಮಂಡಿಸಿದ್ದರು. ಹೀಗಾಗಿ ಬಂಧನದಿಂದ ಇಬ್ಬರ ಬಿಡುಗಡೆಗೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿತ್ತು.
ಕೋರ್ಟ್ ಆದೇಶ ಹೊರಡಿಸುತ್ತಿದ್ದಂತೆ ನಿನ್ನೆ ರಾತ್ರಿ ಐಶ್ವರ್ಯಾ ಗೌಡ, ಹರೀಶ್ ಜೈಲಿನಿಂದ ರಿಲೀಸ್ ಆಗಿದ್ದಾರೆ ಎಂದು ತಿಳಿದು ಬಂದಿದೆ.