ಹಾಸನ : ಹೇಮಾವತಿ ನದಿಗೆ ಹಾರಿ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ತಾಲೂಕಿನ ಗೊರೂರು ಶೆಟ್ಟಿಹಳ್ಳಿಯಲ್ಲಿ ಘಟನೆ ನಡೆದಿದೆ. ಇಂದಿರಾನಗರದ ನಿವಾಸಿ ಜೆಜೆ ಪ್ರಮೋದ್ ಎಂಬುವವರು ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣ ತಿಳಿದು ಬಂದಿಲ್ಲ.
ಈ ಮೊದಲು ಪ್ರಮೋದ್ ನಾಪತ್ತೆಯಾದಾಗ ಹಾಸನದ ಕೆಆರ್ ಪುರಂ ಠಾಣೆಯಲ್ಲಿ ಪೋಷಕರು ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು. ಬಳಿಕ ಹುಡುಕಾಟ ನಡೆಸಿದಾಗ ಹೇಮಾವತಿ ಸೇತುವೆ ಬಳಿ ಪ್ರಮೋದ್ ಬೈಕ್ ಪತ್ತೆಯಾಗಿತ್ತು. ನಂತರ ಅಗ್ನಿಶಾಮಕ ದಳ ಹಾಗೂ ಪೊಲೀಸರು ಪರಿಶೀಲನೆ ನಡೆಸಿದಾಗ ಶವ ಪತ್ತೆಯಾಗಿದೆ.