ರಾಯಚೂರಿನಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರೆದಿದ್ದು, ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ.
ಶಿವಲಿಂಗಮ್ಮ (21) ಎಂಬ ಮಹಿಳೆ ಮೃತಪಟ್ಟಿದ್ದು, ತಾಯಿ ಹಾಗೂ ಇಬ್ಬರು ಮೃತಪಟ್ಟಿದ್ದಾರೆ. ಡಿ.29 ರಂದು ಶಿವಲಿಂಗಮ್ಮಗೆ ಸಿಜೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು, ನಂತರ ಐಸಿಯುನಲ್ಲಿ ಇಡಲಾಗಿತ್ತು. ಆದರೆ ಇಂದು ಮುಂಜಾನೆ ಶಿವಲಿಂಗಮ್ಮ ಹಾಗೂ ಮಗು ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಲೇ ತಾಯಿ-ಮಗು ಮೃತಪಟ್ಟಿದೆ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ.ಈ ಮೂಲಕ ರಾಯಚೂರಿನಲ್ಲಿ ಅಕ್ಟೋಬರ್ ತಿಂಗಳಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ.