ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಹಾಡಹಗಲೇ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ. ಹುಬ್ಬಳ್ಳಿಯ ಅಯೋಧ್ಯೆ ನಗರದಲ್ಲಿ ಘಟನೆ ನಡೆದಿದೆ.
ಮಾರುತಿ ಎಂಬುವನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಮಾರುತಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಾಯಾಳು ಯುವಕನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.