ತುಮಕೂರು: ದೂರು ನೀಡಲು ಬಂದ ಮಹಿಳೆಯನ್ನು ಪುಸಲಾಯಿಸಿ ಆಕೆಯ ಮೇಲೆ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಘಟನೆಯ ವಿಡಿಯೋ ಗುರುವಾರ ವೈರಲ್ ಆಗಿದೆ.
ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಪಾವಗಡದಿಂದ ಬಂದಿದ್ದ ಮಹಿಳೆಗೆ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಪುಸಲಾಯಿಸಿ ತನ್ನ ಕಚೇರಿಯ ಶೌಚಾಲಯಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಕಿಟಿಕಿಯ ಮೂಲಕ ವ್ಯಕ್ತಿಯೊಬ್ಬರ ಇದನ್ನು ಸೆರೆಹಿಡಿದು ಜಾಲತಾಣದಲ್ಲಿ ಹರಿಬಿಟ್ಟಿದ್ದು, ವಿಡಿಯೋ ವೈರಲ್ ಆಗಿದೆ. ಘಟನೆಯ ಬಳಿಕ ಡಿವೈಎಸ್ಪಿ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದ್ದು, ಮಾಹಿತಿ ಪಡೆದ ಎಸ್ಪಿ ಅಶೋಕ್ ಅವರು ಕ್ರಮಕ್ಕೆ ಸೂಚನೆ ನೀಡಿದ್ದಾರೆ.