ಬೀದರ್: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ಸಚಿನ್ ಪಾಂಚಾಳ ಗುತ್ತಿಗೆದಾರನೇ ಅಲ್ಲ, ಲೈಸೆನ್ಸ್ ನೋಂದಣಿಯಾಗಿರಲಿಲ್ಲ ಎಂಬ ಮಾತು ಕೇಳಿಬಂದಿತ್ತು. ಇದರ ಬೆನ್ನಲ್ಲೇ ಇದೀಗ ಸಚಿನ್ ಜಿಲ್ಲಾ ಪಂಚಾಯತ್ ಸಿಇಒ ಸಹಿ ನಕಲು ಮಾಡಿದ್ದ ಬಗ್ಗೆಯೂ ಆರೋಪ ಕೇಳಿಬಂದಿದೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂಎಲ್ ಸಿ ತಿಪ್ಪಣ್ಣ, ಸಚಿನ್ ಪಾಂಚಾಳ ಜಿಲ್ಲಾ ಪಂಚಾಯತಿ ಸಿಇಒ ಸಹಿ ಫೋರ್ಜರಿ ಮಾಡಿ ಸಿಕ್ಕಿಹಕೈಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸಚಿನ್ ಕೆಲಸ ಕಳೆದುಕೊಂಡಿದ್ದ. ಅಲ್ಲದೇ ಆತ ಗುತ್ತಿಗೆದಾರನೇ ಅಲ್ಲ ಎಂದು ಕೂಡ ಹೇಳಲಾಗುತ್ತಿದೆ. ಹಾಗಾಗಿ ಸಚಿನ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗಲಿ. ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ ಎಂದಿದ್ದಾರೆ.
ಇನ್ನು ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ ವರ್ಗಾವಣೆಯಾಗಿರುವ ಬೆನ್ನಲ್ಲೇ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.