ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮನೆ ಮುಂದೆ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿರುವ ಘಟನೆ ಬೆಂಗಳೂರಿನ ಶಿವಾನಂದ ಸರ್ಕಲ್ ನಲ್ಲಿ ನಡೆದಿದೆ.
ಶಿವಾನಂದ ಸರ್ಕಲ್ ನಲ್ಲಿರುವ ಬಿ.ವೈ.ವಿಜಯೇಂದ್ರ ನಿವಾಸದ ಎದರು ಕಾಂಗ್ರೆಸ್ ನಾಯಕ ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ವಿಜಯೇಂದ್ರ ಮನೆಗೆ ಮುತ್ತಿಗೆ ಹಾಕಿ ಪೋಸ್ಟರ್ ಅಂಟಿಸಲು ಮುಂದಾಗಿದ್ದಾರೆ.
ಕಾಂಗ್ರೆಸ್ ನಾಯಕರ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯೇಂದ್ರ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದ ಪ್ರತಿಭಟನಾನಿರತ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.