ಬೆಂಗಳೂರು : ಪ್ರೀತಿಸಿದ ಹುಡುಗಿ ದೂರವಾಗಿದ್ದಕ್ಕೆ ಮನನೊಂದು ಬೆಂಗಳೂರಿನಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸತೀಶ್ ಕುಮಾರ್ (25) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದು, ಬಾಣಸವಾಡಿ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸತೀಶ್ ಕಾಲೇಜು ದಿನಗಳಿಂದಲೇ ಯುವತಿಯೋರ್ವಳನ್ನು ಲವ್ ಮಾಡುತ್ತಿದ್ದನು. ಆದರೆ ಇತ್ತೀಚೆಗೆ ಯುವತಿ ಆತನಿಂದ ದೂರವಾಗಿದ್ದಳು. ಇದರಿಂದ ಮನನೊಂದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಾಣಸವಾಡಿ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.