ಬೆಂಗಳೂರು : ಬಸ್ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಮತ್ತೊಂದು ಶಾಕ್ ಎದುರಾಗಿದ್ದು, ಕಾವೇರಿ ನೀರಿನ ದರ ಏರಿಕೆಗೆ ಜಲಮಂಡಳಿ ಚಿಂತನೆ ನಡೆಸಿದೆ.
ನೀರಿನ ದರ ಏರಿಕೆ ಮಾಡುವಂತೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲು ಜಲಮಂಡಳಿ ಸಿದ್ದತೆ ನಡೆಸಿದ್ದು, ಕೆಲವೇ ದಿನಗಳಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ನೀರಿನ ದರ ಏರಿಸಲು ಆದೇಶ ಹೊರಡಿಸಲಾಗುತ್ತದೆ ಎನ್ನಲಾಗಿದೆ. ಜನವರಿಯಲ್ಲೇ ನೀರಿನ ದರ ಏರಿಸಲಾಗುತ್ತಿದೆ.
ಜಲಮಂಡಳಿ ನೌಕರರು, ಸಿಬ್ಬಂದಿಗಳ ವೇತನ ಹೆಚ್ಚಳವಾಗಿದೆ. ಜಲಮಂಡಳಿಗೆ ಪ್ರತಿ ತಿಂಗಳು 81 ಕೋಟಿ ಹೊರೆಯಾಗುತ್ತಿದೆ , ಆದ್ದರಿಂದ ನೀರಿನ ದರ ಹೆಚ್ಚಳ ಮಾಡಲು ಸಿದ್ದತೆ ನಡೆಸಲಾಗಿದೆ ಎನ್ನಲಾಗಿದೆ. ಕಳೆದ ತಿಂಗಳು ಡಿಸಿಎಂ ಡಿ.ಕೆ.ಶಿವಕುಮಾರ್ ಕಾವೇರಿ ನೀರಿನ ದರ ಪರಿಷ್ಕರಣೆ ಮಾಡುವ ಬಗ್ಗೆ ಸುಳಿವು ನೀಡಿದ್ದರು.