ಬೆಂಗಳೂರು : ಶೀಘ್ರವೇ ಸಾರಿಗೆ ಇಲಾಖೆಯಲ್ಲಿ 9000 ಹೊಸ ಸಿಬ್ಬಂದಿಗಳ ನೇಮಕಾತಿ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು ಸಾರಿಗೆ ಬಸ್ ಗಳ ಟಿಕೆಟ್ ದರ ಹೆಚ್ಚಳದ ಕುರಿತು ಪ್ರತಿಕ್ರಿಯೆ ನೀಡಿದರು.
2014 ರಿಂದ ಟಿಕೆಟ್ ದರ ಹೆಚ್ಚಳವಾಗಿಲ್ಲ. ಡೀಸೆಲ್ ಬೆಲೆ ಹೆಚ್ಚಳ ಹಾಗೂ ಸಿಬ್ಬಂದಿಗಳಿಗೆ ವೇತನ ನೀಡಲು ಸರ್ಕಾರಕ್ಕೆ ಹೊರೆಯಾಗುತ್ತಿದೆ. ಆದ್ದರಿಂದ ಸಿಬ್ಬಂದಿ ವೇತನ ಏರಿಕೆ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ ಎಂದರು. ಹಾಗೂ ಶೀಘ್ರವೇ ಸಾರಿಗೆ ಇಲಾಖೆಯಲ್ಲಿ 9000 ಹೊಸ ಸಿಬ್ಬಂದಿಗಳ ನೇಮಕಾತಿ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
4 ನಿಗಮಗಳಿಗೆ ಶಕ್ತಿ ಯೋಜನೆಯ 8,800 ಕೋಟಿ ಹಣ ಬಿಡುಗಡೆ ಆಗಿದೆ. ಕಾಂಗ್ರೆಸ್ ಸರ್ಕಾರ ಬಂದಾಗ ಸಿಬ್ಬಂದಿಗಳಿಗೆ ವೇತನ ಸಮಸ್ಯೆ ಆಗಿಲ್ಲ. ಮೊದಲೇ ಇತ್ತು. ಬಿಜೆಪಿಯವರು ಮಹಿಳಾ ವಿರೋಧಿಗಳು, ಹಾಗಾಗಿ ಶಕ್ತಿ ಯೋಜನೆಯನ್ನು ವಿರೋಧ ಮಾಡುತ್ತಿದ್ದಾರೆ ಎಂದು ಸಚಿವರು ಹೇಳಿದರು.