ತುಮಕೂರು: ಡಿವೈಎಸ್ಪಿ ಕಚೇರಿಯಲ್ಲಿ ಮಹಿಳೆ ಜೊತೆ ರಾಸಲೀಲೆ ನಡೆಸಿದ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಅಮಾನತುಕೊಂಡಿದ್ದ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಬಂಧಿಸಲಾಗಿದೆ.
ದೂರು ನೀಡಲು ಬಂದ ಮಹಿಳೆಯನ್ನು ಪುಸಲಾಯಿಸಿ ಆಕೆಯ ಮೇಲೆ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದು, ಘಟನೆಯ ವಿಡಿಯೋ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ಡಿವೈಎಸ್ಪಿ ರಾಮಚಂದ್ರಪ್ಪ ಅಮಾನತು ಮಾಡಿ ಡಿಜಿ ಐಜಿಪಿ ಆದೇಶ ಹೊರಡಿಸಿದ್ದಾರೆ.
ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಪಾವಗಡದಿಂದ ಬಂದಿದ್ದ ಮಹಿಳೆಗೆ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಪುಸಲಾಯಿಸಿ ತನ್ನ ಕಚೇರಿಯ ಶೌಚಾಲಯಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಕಿಟಿಕಿಯ ಮೂಲಕ ವ್ಯಕ್ತಿಯೊಬ್ಬರು ಇದನ್ನು ಸೆರೆಹಿಡಿದು ಜಾಲತಾಣದಲ್ಲಿ ಹರಿಬಿಟ್ಟಿದ್ದು, ವಿಡಿಯೋ ವೈರಲ್ ಆಗಿತ್ತು.