alex Certify BREAKING : ಹಿರಿಯ ಚಿಂತಕ, ಲೇಖಕ ‘ಪ್ರೊ.ಮುಜಾಫರ್ ಅಸ್ಸಾದಿ’ ನಿಧನ ; CM ಸಿದ್ದರಾಮಯ್ಯ ಸಂತಾಪ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹಿರಿಯ ಚಿಂತಕ, ಲೇಖಕ ‘ಪ್ರೊ.ಮುಜಾಫರ್ ಅಸ್ಸಾದಿ’ ನಿಧನ ; CM ಸಿದ್ದರಾಮಯ್ಯ ಸಂತಾಪ.!

ಬೆಂಗಳೂರು : ಹಿರಿಯ ಚಿಂತಕ, ಲೇಖಕ ಪ್ರೊ.ಮುಝಾಫರ್ ಅಸ್ಸಾದಿ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ನಮ್ಮೆಲ್ಲರಿಗೆ ಪ್ರೀತಿಪಾತ್ರರಾಗಿದ್ದ ಹಿರಿಯ ವಿದ್ವಾಂಸ ಮತ್ತು ಸಾಮಾಜಿಕ ಚಿಂತಕ ಪ್ರೊ.ಮುಝಾಫರ್ ಅಸ್ಸಾದಿ ಅವರ ಅನಿರೀಕ್ಷಿತ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಪ್ರೊ.ಅಸ್ಸಾದಿ ಕೇವಲ ಒಬ್ಬ ಪ್ರಾಧ್ಯಾಪಕ ಆಗಿರಲಿಲ್ಲ. ನಾಡಿನ ಜನಪರ ಹೋರಾಟವನ್ನು ವೈಚಾರಿಕ ಚಿಂತನೆಯ ಮಾರ್ಗದರ್ಶನದೊಂದಿಗೆ ಮುನ್ನಡೆಸಿದವರು. ಅವರ ಅಗಲಿಕೆಯಿಂದ ನಾಡು ಬಡವಾಗಿದೆ, ಅವರ ಅಗಲಿಕೆಯಿಂದ ಸೃಷ್ಟಿಯಾಗಿರುವ ನಿರ್ವಾತವನ್ನು ತುಂಬುವುದು ಕಷ್ಟ. ನಿರಂತರವಾದ ಅಧ್ಯಯನ ಮತ್ತು ಸಂಶೋಧನೆಗಳಿಂದಾಗಿ ಕರ್ನಾಟಕದಲ್ಲಿ ಮಾತ್ರವಲ್ಲ ದೇಶ-ವಿದೇಶಗಳಲ್ಲಿಯೂ ತಮ್ಮ ವಿದ್ವತ್ಪೂರ್ಣ ಬರವಣಿಗೆ ಮತ್ತು ಉಪನ್ಯಾಸಗಳ ಮೂಲಕ ಜನಪ್ರಿಯರಾಗಿದ್ದ ಪ್ರೊ.ಅಸ್ಸಾದಿ ಅವರು ಕನ್ನಡದ ಹೆಮ್ಮೆಯ ಪುತ್ರ. ವರ್ಷಗಳಿಂದ ನನ್ನ ಹಿತೈಷಿಯಾಗಿ ರಾಜಕೀಯವಾಗಿ ಸದಾ ನನ್ನ ಏಳಿಗೆಯನ್ನು ಹಾರೈಸುತ್ತಿದ್ದ ಪ್ರೊ.ಅಸ್ಸಾದಿ ಅವರ ಸಾವು ವೈಯಕ್ತಿಕವಾಗಿಯೂ ನನ್ನ ಪಾಲಿಗೆ ದೊಡ್ಡ ನಷ್ಟ. ಪ್ರೊ.ಅಸ್ಸಾದಿ ಅವರನ್ನು ಕಳೆದುಕೊಂಡ ಅವರ ಕುಟುಂಬ ಮತ್ತು ಅಪಾರ ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...