ಚಿಕ್ಕಬಳ್ಳಾಪುರ : ಮಾರಕಾಸ್ತ್ರಗಳಿಂದ ಕೊಚ್ಚಿ ಜೆಡಿಎಸ್ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ.
ಹತ್ಯೆಗೊಳಗಾದ ವ್ಯಕ್ತಿಯನ್ನು ಗ್ರಾಮದ ವೆಂಕಟೇಶ್ ಅಲಿಯಾಸ್ ಗೋಲ್ಡ್ ವೆಂಕಟೇಶ್ (50) ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿ 9 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ಅವರು ತಮ್ಮನಾಯಕನಹಳ್ಳಿ ಗೇಟ್ ನಲ್ಲಿರುವ ಮೆಡಿಕಲ್ ಸ್ಟೋರ್ ನಿಂದ ಮನೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದರು.ಈ ವೇಳೆ ವೆಂಕಟೇಶ್ ರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಅವರ ಕೈ ಕಟ್ ಮಾಡಿ ಅವರನ್ನ ಕೆಳಗೆ ಬೀಳಿಸಿ ಮನಸೋ ಇಚ್ಚೆ ಬರ್ಬರವಾಗಿ ಕೊಚ್ಚಿ ಹತ್ಯೆ ಮಾಡಿದ್ದಾರೆ. ಪರಿಣಾಮ ವೆಂಕಟೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಳೇ ದ್ವೇಷದ ಹಿನ್ನೆಲೆ ಕೊಲೆ ನಡೆದಿರಬಹುದೆಂದು ಶಂಕಿಸಲಾಗಿದೆ.