ಮಂಡ್ಯ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಪ್ರವಾಸದ ವೇಳೆ ರಾಜ್ಯ ಸರ್ಕಾರ ಪ್ರೋಟೋಕಾಲ್ ಪಾಲಿಸಿಲ್ಲ. ನಿಯಮ ಉಲ್ಲಂಘನೆ ಮಾಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸಚಿವರ ರಾಜ್ಯ ಪ್ರವಾಸದ ವೇಳೆ ರಾಜ್ಯ ಸರ್ಕಾರ ವಾಹನ ಒದಗಿಸುವುದು ನಿಯಮ. ಆದರೆ ಸರ್ಕಾರ ವಾಹನ ಒದಗಿಸಿಲ್ಲ. ನಾನು ಕೇಂದ್ರ ಸರ್ಕಾರದ ವಾಹನದಲ್ಲಿಯೇ ಓಡಾಡುತ್ತಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ರಾಜ್ಯ ಪ್ರವಾಸದ ವೇಳೆ ಕಾರು ನೀಡದೇ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಕಿಡಿಕಾರಿದ್ದಾರೆ.
ಕೇಂದ್ರ ಸರ್ಕಾರದ ವಾಹನದಲ್ಲಿಯೇ ಹೆಚ್.ಡಿ.ಕುಮಾರಸ್ವಾಮಿ ಮಂಡ್ಯ, ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿದ್ದು, ರಾಜ್ಯ ಸರ್ಕಾರದ ನಡೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ಇಲ್ಲಿಯವರೆಗೂ ನಮಗೆ ಕಾರು ಕೊಟ್ಟಿಲ್ಲ. ಹೀಗಾಗಿ ನಾನು ನಮ್ಮ ಕೇಂದ್ರ ಸರ್ಕಾರದ ವಾಹನ ಬಳಕೆ ಮಾಡುತ್ತಿದ್ದೇನೆ. ಬೃಹತ್ ಕೈಗಾರಿಕಾ ಇಲಾಖೆ ವಾಹನ ತರಿಸಿಕೊಂಡಿದ್ದೇನೆ. ರಾಜ್ಯ ಸರ್ಕಾರ ಪ್ರೋಟೋಕಾಲ್ ಪಾಲಿಸುತ್ತಿಲ್ಲ ಎಂದು ತಿಳಿಸಿದ್ದಾರೆ.